alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಕ್ಕೊಂದು ಸಮನ್ವಯ ಸಮಿತಿ: ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಯಾವುದೇ ಗೊಂದಲ, ಅನುಮಾನ, ಅಸಮಾಧಾನಕ್ಕೆ ಎಡೆಯಾಗದಂತೆ ನೋಡಿಕೊಳ್ಳಲು, ನೀತಿ-ನಿರೂಪಣೆ ವಿಚಾರವಾಗಿ ಎಲ್ಲರೂ ಒಟ್ಟಾಗಿ ಸಾಗಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಉದ್ದೇಶ ಉತ್ತಮ ಆಡಳಿತ ನೀಡುವುದಾಗಿದೆ. 2008ರಲ್ಲಿ ಬಿಜೆಪಿಯ ಕೆಟ್ಟ ಆಡಳಿತ ನೋಡಿದ್ದೇವೆ. ಅವರ ಒಡೆದು ಆಳುವ ನೀತಿ ವಿರುದ್ಧ ನಾವು ಸಮ್ಮಿಶ್ರ ಸರ್ಕಾರ ರಚಿಸಿದ್ದೇವೆ ಎಂದರು.

ಕಾಂಗ್ರೆಸ್ ಶಾಸಕರು ಎಲ್ಲೂ ಹೋಗಲ್ಲ, ಅವರು ಮಾರಾಟಕ್ಕಿಲ್ಲ, ಶಾಸಕರನ್ನು ಕೊಳ್ಳುವಂತಹ ಹೀನ ರಾಜಕಾರಣಕ್ಕೆ ನಮ್ಮ ವಿರೋಧವಿದೆ. ಪ್ರಧಾನಿ ನರೇಂದ್ರ ಮೋದಿಯವರ ಸರ್ವಾಧಿಕಾರಿ ಧೋರಣೆಗೆ ಕಡಿವಾಣ ಹಾಕಬೇಕಿದೆ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ವಿಶ್ವಾಸಮತ ಸಾಬೀತಾದ ಬಳಿಕ ಇನ್ನೂ ಹೆಚ್ಚಿನ ಚರ್ಚೆ ನಡೆಸಿ ಸಮನ್ವಯ ಸಮಿತಿ ರಚಿಸಬೇಕೆಂದರು. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದ ಅವರು, 5 ವರ್ಷ ಅಭಿವೃದ್ಧಿಪರ ಸುಭದ್ರ ಸರ್ಕಾರ ನಡೆಸುವ ಭರವಸೆಯನ್ನು ವ್ಯಕ್ತಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...