alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಧರೊಂದಿಗೆ ಬಿ.ಜೆ.ಪಿ. ನಾಯಕರ ದೀಪಾವಳಿ

yalahanka

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಐ.ಟಿ.ಬಿ.ಪಿ. ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ. ನಾಯಕರು ಯಲಹಂಕದಲ್ಲಿರುವ ಬಿ.ಎಸ್.ಎಫ್. ಶಿಬಿರದಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದರು.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತ್ ಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಮೊದಲಾದ ನಾಯಕರು ಯಲಹಂಕದಲ್ಲಿರುವ ಬಿ.ಎಸ್.ಎಫ್. ತರಬೇತಿ ಶಿಬಿರಕ್ಕೆ ತೆರಳಿ, ಸಿಹಿ ಹಂಚಿ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ದೇಶದ ನಾಗರೀಕರು ಸೇನೆಯೊಂದಿಗೆ ಇದ್ದಾರೆ. ಪ್ರತಿ ಕುಟುಂಬದಿಂದಲೂ ಒಬ್ಬರು ಸೈನಿಕರಾಗಬೇಕು ಎಂದು ಹೇಳಿದ್ದಾರೆ.

ಯೋಧರೊಂದಿಗೆ ನಿರಂತರ ಸಂಪರ್ಕದಿಂದ ಇರಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸೈನಿಕರಿಗೆ ಆತ್ಮಸ್ಥೈರ್ಯ ತುಂಬಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಸೈನಿಕರಿಗೆ ದೀಪಾವಳಿ ಸಮರ್ಪಣೆ ಎಂದು ಹೇಳಿದ್ದು,  ಅವರು ಕರೆ ನೀಡಿದಂತೆ ಸೈನಿಕರೊಂದಿಗೆ ಹಬ್ಬ ಆಚರಿಸಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಾತನಾಡಿ, ಯೋಧರೊಂದಿಗೆ ದೀಪಾವಳಿ ಆಚರಿಸಿರುವುದು ಖುಷಿಯಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...