alex Certify
ಕನ್ನಡ ದುನಿಯಾ       Mobile App
       

Kannada Duniya

‘ಒಂದು ಹುದ್ದೆಗೆ ಪರಮೇಶ್ವರ್ ರಾಜೀನಾಮೆ ಕೊಡಲಿ’

The Minister of State (Independent Charge) for Micro, Small & Medium Enterprises, Shri K.H. Muniyappa interacting with the Press, in New Delhi on April 02, 2013.

ನವದೆಹಲಿ: ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಅದೇ ಸ್ಥಾನದಲ್ಲಿ ಮುಂದುವರೆಯಲು ಡಾ. ಜಿ. ಪರಮೇಶ್ವರ್ ಆಸಕ್ತಿ ಹೊಂದಿದ್ದಾರೆ.

ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಎಸ್.ಆರ್. ಪಾಟೀಲ್, ಕೆ.ಹೆಚ್. ಮುನಿಯಪ್ಪ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬರುತ್ತಿವೆ.

ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಮಾತನಾಡಿದ ಸಂಸದ ಕೆ.ಹೆಚ್. ಮುನಿಯಪ್ಪ, ಪರಮೇಶ್ವರ್ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಮುಂದುವರೆಯುವುದಾದರೆ ಮುಂದುವರೆಯಲಿ. ಹಾಗೆ ಮುಂದುವರೆಯುವುದಾದರೆ, ಗೃಹ ಸಚಿವರ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪಕ್ಷದ ಸಂಘಟನೆ ಸರಿಯಾಗಿ ಆಗುತ್ತಿಲ್ಲ. ಗೃಹ ಇಲಾಖೆ ಕೂಡ ಮುಖ್ಯವಾದ ಇಲಾಖೆಯಾಗಿದೆ. ಎರಡಲ್ಲಿ ಒಂದು ಹುದ್ದೆಗೆ ಪರಮೇಶ್ವರ್ ರಾಜೀನಾಮೆ ನೀಡಲಿ. ಇನ್ನೊಬ್ಬರಿಗೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದ್ದಾರೆ.

ನಾನು ಸೇರಿದಂತೆ ಡಿ.ಕೆ.ಶಿವಕುಮಾರ್, ಎಸ್.ಆರ್. ಪಾಟೀಲ್, ಎಂ.ಬಿ. ಪಾಟೀಲ್ ಅವರಲ್ಲಿ ಯಾರಿಗೆ ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನ ನೀಡಿದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷವನ್ನು ಸಂಘಟಿಸಿ ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...