alex Certify
ಕನ್ನಡ ದುನಿಯಾ       Mobile App
       

Kannada Duniya

ಬಯಲಾಯ್ತು ವೇಶ್ಯಾವಾಟಿಕೆಯ ಮತ್ತೊಂದು ರೂಪ

devad

ಕಲಬುರಗಿ: ದೇವದಾಸಿ ಹೆಸರಲ್ಲಿ ಕೆಳ ಸಮುದಾಯದ ಹೆಣ್ಣುಮಕ್ಕಳನ್ನು ವೇಶ್ಯಾವಾಟಿಕೆಗೆ ತಳ್ಳುವ ಅನಿಷ್ಟ ಪದ್ಧತಿ ಇನ್ನೂ ಇದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ 5 ನೇ ತರಗತಿ ಓದುತ್ತಿರುವ ಬಾಲಕಿಗೆ ದೇವರ ಹೆಸರಲ್ಲಿ 5 ವರ್ಷದ ಹಿಂದೆ ಮುತ್ತು, ತಾಳಿ ಕಟ್ಟಿಸಲಾಗಿದೆ.

ಇದು ಗಮನಕ್ಕೆ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ. ಪೋಷಕರು, ಶಿಕ್ಷಕರು, ಮುತ್ತುಕಟ್ಟಿದ ಪೂಜಾರಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಭಾಗದ ಹಳ್ಳಿಗಳಲ್ಲಿ ಹೆಣ್ಣುಮಕ್ಕಳನ್ನು ದೇವರ ಹೆಸರಲ್ಲಿ ಮುತ್ತುಕಟ್ಟಿಸಿ ದೇವದಾಸಿಯರನ್ನಾಗಿ ಮಾಡಲಾಗುತ್ತದೆ. ವೇಶ್ಯಾವಾಟಿಕೆಗೆ ತಳ್ಳಿ ಶ್ರೀಮಂತರು ಅವರನ್ನು ಬಳಸಿಕೊಳ್ಳುತ್ತಾರೆ.

ಈ ಅನಿಷ್ಟ ಪದ್ಧತಿ ಮರೆಯಾಗಿದೆ ಎಂದು ಹೇಳಲಾಗಿತ್ತಾದರೂ, ಬಾಲಕಿಯ ಪ್ರಕರಣದಿಂದ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ.

ಬಾಲಕಿಯ ಪೋಷಕರು, ವಿಷಯ ಗೊತ್ತಿದ್ದರೂ, ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದ ಶಿಕ್ಷಕರು ಹಾಗೂ ಮುತ್ತುಕಟ್ಟಿದ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...