alex Certify
ಕನ್ನಡ ದುನಿಯಾ       Mobile App
       

Kannada Duniya

ರಾಮನಗರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ದೇವೇಗೌಡರ ಗ್ರೀನ್ ಸಿಗ್ನಲ್

ನವೆಂಬರ್ 3 ರಂದು ನಡೆಯಲಿರುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡ ಈ ವಿಚಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಬುಧವಾರ ರಾತ್ರಿ ಜೆಡಿಎಸ್ ಕಚೇರಿಯಲ್ಲಿ ರಾಮನಗರ ವಿಧಾನ ಸಭಾ ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿದ ದೇವೇಗೌಡರು, ಈ ಚುನಾವಣೆಯಲ್ಲಿ ಸಿ.ಪಿ. ಯೋಗೇಶ್ವರ್ ಅಥವಾ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಟ್ಟಾಗಿ ಅನಿತಾ ಕುಮಾರಸ್ವಾಮಿಯವರ ಗೆಲುವಿಗೆ ಶ್ರಮಿಸುವಂತೆ ತಾಕೀತು ಮಾಡಿದ್ದಾರೆ.

ರಾಮನಗರದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಉಂಟಾದ ಗೊಂದಲದ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ ದೇವೇಗೌಡರು, ಯಾವುದೇ ಸಮಸ್ಯೆ ಇದ್ದರೆ ನನ್ನ ಬಳಿ ಬಂದು ಹೇಳಿ ಎಂದು ತಿಳಿಸಿದ್ದಾರೆ. ಅಕ್ಟೋಬರ್ 15ರಂದು ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ದೇವೇಗೌಡರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...