alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಚೆನ್ನೈಗೆ ಇಂದು ಮಾಜಿ ಪ್ರಧಾನಿ ದೇವೇಗೌಡರ ಭೇಟಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಚೆನ್ನೈಗೆ ತೆರಳಲಿದ್ದಾರೆಂದು ತಿಳಿದುಬಂದಿದೆ.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಸಹ ದೇವೇಗೌಡರೊಂದಿಗೆ ಚೆನ್ನೈಗೆ ತೆರಳಲಿದ್ದಾರೆಂದು ಹೇಳಲಾಗಿದೆ.

ಅನಾರೋಗ್ಯದ ಕಾರಣದಿಂದ ತಮ್ಮ ಗೋಪಾಲಪುರಂ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರ ಆರೋಗ್ಯ ಸ್ಥಿತಿ ಏರುಪೇರಾದ ಕಾರಣ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರುಣಾನಿಧಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಕಾವೇರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...