alex Certify
ಕನ್ನಡ ದುನಿಯಾ       Mobile App
       

Kannada Duniya

ಶೋಭಾ ಕರಂದ್ಲಾಜೆ ಕುರಿತು ‘ಸ್ಫೋಟಕ’ ಮಾಹಿತಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆಯವರ ಕುರಿತ ಸ್ಪೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

ಈ ಹಿಂದೆ ನನ್ನ ನಿವಾಸಕ್ಕೆ ಆಗಮಿಸಿದ್ದ ಶೋಭಾ ಕರಂದ್ಲಾಜೆಯವರು, ತಮ್ಮ ಹಿಂದೆ 23 ಶಾಸಕರಿದ್ದಾರೆ. ಯಡಿಯೂರಪ್ಪನವರಿಗೆ ಮಂತ್ರಿ ಸ್ಥಾನ ಕೊಟ್ಟು, ನನ್ನನ್ನು ವಿಧಾನ ಪರಿಷತ್ ಸದಸ್ಯೆಯನ್ನಾಗಿ ಮಾಡಿ ಎಂದು ಕೇಳಿಕೊಂಡಿದ್ದರು. ಆ ಸಂದರ್ಭದಲ್ಲಿ, ರಾಜಕೀಯದಲ್ಲಿ ತಾಳ್ಮೆ ಮುಖ್ಯ. ಮುಂದೆ ಒಳ್ಳೆ ಕಾಲ ಕೂಡಿ ಬರುತ್ತದೆ ಎಂದು ಹೇಳಿ ಕಳುಹಿಸಿದ್ದೆ ಎಂದು ತಿಳಿಸಿದ್ದಾರೆ.

ನಾನು ಶಾಸಕನಾದಾಗ 23 ವರ್ಷವಾಗಿತ್ತು. ಈಗಲೂ ರಾಜಕೀಯದಲ್ಲಿ ಮುಂದುವರೆದಿದ್ದೇನೆ. ಶಕ್ತಿ ಇರುವವರೆಗೂ ನಾಡಿನ ಹಿತ ಹಾಗೂ ರೈತರ ಪರ ಹೋರಾಟ ಮಾಡುತ್ತೇನೆ ಎಂದು ಹೇಳಿದ ದೇವೇಗೌಡರು, ಪ್ರಸ್ತುತ ಮೈತ್ರಿಕೂಟ ಸರ್ಕಾರ ಅಧಿಕಾರದಲ್ಲಿರುವುದೇ ಒಂದು ದೊಡ್ಡ ಪವಾಡ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...