alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ವಿಸ್ತರಣೆ ಕುರಿತಂತೆ ದೇವೇಗೌಡ-ಸಿದ್ದರಾಮಯ್ಯ ಮಹತ್ವದ ಮಾತುಕತೆ

ರಾಜ್ಯ ದೋಸ್ತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೋಮವಾರದಂದು ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಪದೇ ಪದೇ ಮುಂದೂಡಿಕೆಯಾಗುತ್ತಾ ಬರುತ್ತಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಅಸಮಾಧಾನ ಭುಗಿಲೇಳಬಹುದೆಂಬ ಆತಂಕದ ಕಾರಣಕ್ಕೆ ಇಬ್ಬರು ನಾಯಕರ ಈ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲವನ್ನು ಕೆರಳಿಸಿದೆ.

ಸಂಪುಟ ವಿಸ್ತರಣೆ ಮಾಡಲು ಈ ಇಬ್ಬರು ನಾಯಕರು ಈಗ ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆಂದು ಹೇಳಲಾಗುತ್ತಿದ್ದು, ಉಳಿದಿರುವ ಸ್ಥಾನಗಳನ್ನು ಸಚಿವ ಸ್ಥಾನದ ಆಕಾಂಕ್ಷಿ ಶಾಸಕರುಗಳಿಗೆ ಅಸಮಾಧಾನವಾಗದಂತೆ ಯಾವ ರೀತಿ ನೀಡಬಹುದೆಂಬುದರ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ. ಯಾವಾಗ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...