alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿಎಂ

Siddaramaiah and deve gowdaತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ಉದ್ಬವಿಸಿರುವ ಬಿಕ್ಕಟ್ಟಿನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಸಚಿವ ಮಹಾದೇವಪ್ಪ ಅವರೊಂದಿಗೆ ದೇವೇಗೌಡರ ಪದ್ಮನಾಭ ನಗರದ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಮುಂದೆ ಅನುಸರಿಸಬೇಕಾದ ನಡೆಯ ಕುರಿತು ಗೌಡರ ಸಲಹೆ ಕೇಳಿದ್ದಾರೆನ್ನಲಾಗಿದೆ.

ಇದಕ್ಕೂ ಮುನ್ನ ಸಿದ್ದರಾಮಯ್ಯನವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ದೇವೇಗೌಡರು, ಸುಪ್ರೀಂ ಕೋರ್ಟ್ ಸೂಚನೆಯಂತೆ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಸೂಚಿಸಿದ್ದಾರೆಂದು ಹೇಳಲಾಗಿದ್ದು, ಮುಖಾಮುಖಿ ಭೇಟಿಯಲ್ಲೂ ಇದನ್ನೇ ಪುನರುಚ್ಚರಿಸಿದ್ದಾರೆಂದು ತಿಳಿದುಬಂದಿದೆ. ನಿಮ್ಮ ಜೊತೆ ನಾವಿದ್ದೇವೆ ಎಂಬ ಅಭಯವನ್ನೂ ದೇವೇಗೌಡರು ಸಿದ್ದರಾಮಯ್ಯನವರಿಗೆ ನೀಡಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...