alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಸೇರ್ಪಡೆಗೆ ಧನಂಜಯ್ ಕುಮಾರ್ ಸಜ್ಜು

dhananjay-kumar 347ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಅವರ ಕಟ್ಟಾ ಬೆಂಬಲಿಗರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಪೈಕಿ ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ಮುಂಚೂಣಿಯಲ್ಲಿದ್ದು, ಪಕ್ಷ ಸೇರ್ಪಡೆ ಕುರಿತು ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಮಾತುಕತೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಅದನ್ನು ಪೂರ್ಣಗೊಳಿಸಿದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದಾರೆ.

ಆದರೆ ಧನಂಜಯ್ ಕುಮಾರ್ ಅವರ ಪಕ್ಷ ಸೇರ್ಪಡೆಗೆ ಬಿಜೆಪಿಯ ಕೆಲ ನಾಯಕರು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪಕ್ಷದ ವರಿಷ್ಟ ನಾಯಕ ಲಾಲ್ ಕೃಷ್ಣ ಆಡ್ವಾನಿಯವರ ವಿರುದ್ದ ಗುರುತರ ಆರೋಪ ಮಾಡಿದ್ದಲ್ಲದೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪಕ್ಕೆ ಗುರಿಯಾಗಿದ್ದ ಧನಂಜಯ್ ಕುಮಾರ್, ಈ ಕಾರಣಕ್ಕಾಗಿಯೇ ಉಚ್ಚಾಟಿತರಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...