alex Certify
ಕನ್ನಡ ದುನಿಯಾ       Mobile App
       

Kannada Duniya

ಭಾನುವಾರ ರಾಜ್ಯಕ್ಕೆ ಪಿಎಂ: ಸ್ವಾಗತಕ್ಕೆ ಸಜ್ಜಾದ ಧರ್ಮಸ್ಥಳ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಮೋದಿ ಧರ್ಮಸ್ಥಳಕ್ಕೆ ಬರ್ತಿದ್ದಾರೆ. ಮೋದಿಯ ಅಕ್ಟೋಬರ್ 29ರ ಕಾರ್ಯಕ್ರಮ ಹೀಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಳಿಗ್ಗೆ 10.30ಕ್ಕೆ ಮಂಗಳೂರಿಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ವಿಶೇಷ ಸೇನಾ ಹೆಲಿಕಾಪ್ಟರ್ ನಲ್ಲಿ ಮೋದಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. 11.00 ಗಂಟೆಗೆ ವೀರೇಂದ್ರ ಹೆಗ್ಗಡೆಯವರ ನಿವಾಸಕ್ಕೆ ಭೇಟಿ ನೀಡಲಿರುವ ಮೋದಿ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಲಿದ್ದಾರೆ.

ಸರಿಯಾಗಿ  11.30ಕ್ಕೆ ಮೋದಿ ಧರ್ಮಸ್ಥಳದ ಮಂಜುನಾಥನ  ದರ್ಶನ ಪಡೆಯಲಿದ್ದಾರೆ. 11.40ಕ್ಕೆ ರಸ್ತೆ ಮೂಲಕ ಉಜಿರೆಗೆ ಪ್ರಯಾಣ ಬೆಳೆಸಲಿರುವ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮುಗಿಸಿ 12.50ಕ್ಕೆ ರಸ್ತೆ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್ ಗೆ ಬರಲಿರುವ ಮೋದಿ, ಹೆಲಿಕಾಪ್ಟರ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ವಾಪಸ್ ಆಗಲಿದ್ದಾರೆ.

ಮಧ್ಯಾಹ್ನ 1.10ಕ್ಕೆ ಬಜ್ಪೆಯಿಂದ ವಿಮಾನ ಮೂಲಕ ಪಿಎಂ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಂತ್ರ ಅರಮನೆ ಮೈದಾನದಲ್ಲಿ ನಡೆಯುವ  ಸೌಂದರ್ಯ ಲಹರಿ ಸಮರ್ಪಣಾ ಕಾರ್ಯಕ್ರಮದಲ್ಲಿ  ಮಧ್ಯಾಹ್ನ 3.30ರವರೆಗೆ ಉಪಸ್ಥಿತರಿರಲಿದ್ದಾರೆ.

ಮಂಗಳೂರು, ಬೆಂಗಳೂರು ಕಾರ್ಯಕ್ರಮದ ನಂತ್ರ ಸಂಜೆ 4.45ಕ್ಕೆ ಬೆಂಗಳೂರಿನಿಂದ ಬೀದರ್ ಗೆ ಪ್ರಯಾಣ ಬೆಳೆಸಲಿದ್ದಾರೆ ಮೋದಿ. ಸಂಜೆ 5.10ಕ್ಕೆ ಬೀದರ್-ಕಲಬುರಗಿ ರೈಲು ಲೋಕಾರ್ಪಣೆ  ಮಾಡಿ  ಸಂಜೆ 6.20ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...