alex Certify
ಕನ್ನಡ ದುನಿಯಾ       Mobile App
       

Kannada Duniya

ಅ.29 ರಂದು ಧರ್ಮಸ್ಥಳಕ್ಕೆ ಮೋದಿ: ಭಕ್ತರಿಗೆ ಸ್ವಾಮಿಯ ದರ್ಶನ ಇಲ್ಲ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಉಜಿರೆಯಲ್ಲಿ ಸಮಾವೇಶ ನಡೆಯಲಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮೋದಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಮೋದಿ ಭೇಟಿ ಹಿನ್ನಲೆಯಲ್ಲಿ ಭದ್ರತೆ ದೃಷ್ಠಿಯಿಂದ ಅಕ್ಟೋಬರ್ 28 ರಂದು ಮಧ್ಯಾಹ್ನ 2 ಗಂಟೆಯಿಂದ ಅಕ್ಟೋಬರ್ 29 ರಂದು ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ದೇವರ ದರ್ಶನ ಪಡೆಯಲು ನಿರ್ಬಂಧಿಸಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ಕೋರಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದಾರೆ. ಸಮಾವೇಶದಲ್ಲಿ ಪ್ರಧಾನಿ, ಗಣ್ಯರು ಹಾಗೂ ಲಕ್ಷಾಂತರ ಮಂದಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...