alex Certify
ಕನ್ನಡ ದುನಿಯಾ       Mobile App
       

Kannada Duniya

ದಿಡ್ಡಳ್ಳಿಯಲ್ಲಿ ಗುಡಿಸಲು ತೆರವು ಕಾರ್ಯಾಚರಣೆ

adivasi

ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ದಿಡ್ಡಳ್ಳಿಯಲ್ಲಿ ಆದಿವಾಸಿಗಳ ತೀವ್ರ ವಿರೋಧದ ನಡುವೆಯೂ, ಗುಡಿಸಲು ತೆರವು ಕಾರ್ಯಾಚರಣೆ ನಡೆಸಲಾಗಿದೆ.

500 ಕ್ಕೂ ಅಧಿಕ ಗುಡಿಸಲುಗಳನ್ನು ಮೀಸಲು ಅರಣ್ಯದಲ್ಲಿ ನಿರ್ಮಿಸಲಾಗಿದೆ ಎಂದು ಆರೋಪಿಸಿ, ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಗುಡಿಸಲು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಗುಡಿಸಲು ತೆರವಿಗೆ ಆದಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ತೆರವು ಕಾರ್ಯ ನಡೆಸಲಾಗಿದೆ. ಆದಿವಾಸಿ ನಾಯಕಿ ಮುತ್ತಮ್ಮ, ಕೂಡಲೇ ತೆರವು ನಿಲ್ಲಿಸಿ ಎಂದು ಮರವನ್ನು ಏರಿ ಪ್ರತಿಭಟನೆ ನಡೆಸಿದ್ದಾರೆ.

ತೆರವು ಕಾರ್ಯ ಸ್ಥಗಿತಗೊಳಿಸದಿದ್ದರೆ, ಬೆತ್ತಲೆ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಮುತ್ತಮ್ಮ ಅವರಿಗೆ ಮರದಿಂದ ಕೆಳಗಿಳಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಹೇಳಿದರೂ, ಅವರು ಪ್ರತಿಭಟನೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...