alex Certify
ಕನ್ನಡ ದುನಿಯಾ       Mobile App
       

Kannada Duniya

‘ರಾಜ್ಯದಲ್ಲಿ ಫಲಿತಾಂಶದ ಪರಿಣಾಮವಿಲ್ಲ’

dinesh-gr

ಬೆಂಗಳೂರು: ಆಯಾ ರಾಜ್ಯಗಳ ಸ್ಥಳೀಯ ವಿಚಾರಗಳ ಆಧಾರದ ಮೇಲೆ, ವಿಧಾನಸಭೆ ಚುನಾವಣೆ ನಡೆಯುತ್ತವೆ ಎಂದು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯದ ಚುನಾವಣೆಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಎಲ್ಲಾ ಚುನಾವಣೆಗಳನ್ನು ಒಂದೇ ರೀತಿ ಪರಿಗಣಿಸಲು ಆಗದು. ಆಯಾ ರಾಜ್ಯಗಳ ವಿಷಯಾಧಾರಿತವಾಗಿ ವಿಧಾನಸಭೆ ಚುನಾವಣೆಗಳು ನಡೆಯುತ್ತವೆ. ರಾಜ್ಯದಲ್ಲಿ ನಮ್ಮ ಸರ್ಕಾರ ಉತ್ತಮ ಆಡಳಿತವನ್ನು ನೀಡುತ್ತಿದೆ. ಇದರ ಆಧಾರದ ಮೇಲೆ ಮುಂದಿನ ಚುನಾವಣೆ ಎದುರಿಸುತ್ತೇವೆ. ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬಂದಿದೆ. ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ. ಬಹುಮತ ಪಡೆದ ಬಿ.ಜೆ.ಪಿ.ಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...