alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್

Dinesh-Gundu-Rao 3456ಭಾನುವಾರವಷ್ಟೇ ಸಚಿವ ಸ್ಥಾನ ಕಳೆದುಕೊಂಡಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿರುವ ಎಐಸಿಸಿ, ಪಕ್ಷ ಸಂಘಟನೆಗಾಗಿ ದಿನೇಶ್ ಗುಂಡೂರಾವ್ ಅವರನ್ನು ಈ ಮಹತ್ವದ ಹುದ್ದೆಗೆ ನೇಮಕ ಮಾಡಿದೆ ಎನ್ನಲಾಗಿದೆ.

ದಿನೇಶ್ ಗುಂಡೂರಾವ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವ ಸುದ್ದಿ ಬಹಿರಂಗಗೊಂಡಾಗಲೇ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗುವುದೆಂದು ಹೇಳಲಾಗಿತ್ತು. ಆದರೆ ರಾಜ್ಯ ರಾಜಕಾರಣದಲ್ಲೇ ಮುಂದುವರಿಯಲು ಅವರು ಬಯಸಿದ ಕಾರಣ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಅಧ್ಯಕ್ಷರನ್ನಾಗಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಲಾಗುವುದೆಂದು ಹೇಳಲಾಗಿದ್ದು, ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಿವಕುಮಾರ್ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ದಿನೇಶ್ ಗುಂಡೂರಾವ್ ಒಗ್ಗಟ್ಟಾಗಿ ಕೆಲಸ ಮಾಡಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರವೇರಬಹುದೆಂಬ ಲೆಕ್ಕಾಚಾರವನ್ನು ಕಾಂಗ್ರೆಸ್ ಹೈಕಮಾಂಡ್ ಹೊಂದಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...