alex Certify
ಕನ್ನಡ ದುನಿಯಾ       Mobile App
       

Kannada Duniya

‘ದೇವಸ್ಥಾನಕ್ಕೆ ಹೋಗಿದ್ದಾರಂತೆ ಕಾಂಗ್ರೆಸ್ ಶಾಸಕರು’

‘ಆಪರೇಷನ್ ಕಮಲ’ಕ್ಕೆ ಒಳಗಾಗಿ ತಮ್ಮ ಪಕ್ಷದ ಕೆಲ ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬಿ.ಸಿ. ಪಾಟೀಲ್ ಸೇರಿದಂತೆ ಕೆಲ ಶಾಸಕರು ದೇವಸ್ಥಾನಕ್ಕೆ ತೆರಳಿದ್ದು ನಾಳೆ ಬೆಂಗಳೂರಿಗೆ ಮರಳಲಿದ್ದಾರೆಂದು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಆಮಿಷಕ್ಕೆ ನಮ್ಮ ಪಕ್ಷದ ಯಾವುದೇ ಶಾಸಕರು ಒಳಗಾಗಿಲ್ಲ. ಸ್ವತಃ ನಾನೇ ಖುದ್ದಾಗಿ ಬಿ.ಸಿ. ಪಾಟೀಲ್, ಸುಧಾಕರ್ ಸೇರಿದಂತೆ ಕೆಲ ಶಾಸಕರ ಜೊತೆ ಮಾತನಾಡಿದ್ದು, ಕೊಲ್ಲಾಪುರದ ದೇವಸ್ಥಾನಕ್ಕೆ ತೆರಳಿರುವ ಅವರುಗಳು ನಾಳೆ ಮರಳಿ ಬೆಂಗಳೂರಿಗೆ ಬರುವುದಾಗಿ ಹೇಳಿದ್ದಾರೆ. ಮಾಧ್ಯಮಗಳಲ್ಲಿ ಅಂತೆ ಕಂತೆಗಳ ಸುದ್ದಿ ಪ್ರಸಾರವಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಯಾವುದೇ ಕಾರಣಕ್ಕೂ ಪತನವಾಗುವುದಿಲ್ಲ. ಪಕ್ಷದ ಶಾಸಕರು ಒಗ್ಗಟ್ಟಾಗಿದ್ದು, ಸೆಪ್ಟೆಂಬರ್ 25 ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...