alex Certify
ಕನ್ನಡ ದುನಿಯಾ       Mobile App
       

Kannada Duniya

ಪದಗ್ರಹಣಕ್ಕೆ ಗೈರಾಗುವ ಮೂಲಕ ಅತೃಪ್ತರು ಕಾಂಗ್ರೆಸ್ ಗೆ ಕೊಡ್ತಾರಾ ಶಾಕ್?

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯಾದ್ಯಂತ ವಿವಿಧ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಇಂದಿನ ಬೃಹತ್ ಸಮಾವೇಶ ಮೊದಲ ಹೆಜ್ಜೆಯಾಗಿದೆ.

ಆದರೆ ಇಂದಿನ ಪದಗ್ರಹಣ ಸಮಾರಂಭಕ್ಕೆ ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಹಿರಿಯ ನಾಯಕರುಗಳಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಸೇರಿದಂತೆ ಕೆಲ ಅತೃಪ್ತರು ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ.

ಒಂದು ವೇಳೆ ಈ ನಾಯಕರು ಗೈರುಹಾಜರಾದರೆ ನೂತನ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರಿಗೆ ಮೊದಲ ದಿನವೇ ದೊಡ್ಡ ಸವಾಲು ಎದುರಾಗಲಿದೆ. ಚುನಾವಣೆಯಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕಾದ ಗುರುತರ ಜವಾಬ್ದಾರಿ ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಅವರ ಮೇಲಿದ್ದು, ಇದನ್ನು ಯಾವ ರೀತಿ ನಿಭಾಯಿಸಿಕೊಂಡು ಹೋಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...