alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ್ರು ಈ ಹೇಳಿಕೆ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಸರ್ಕಾರ ಸುಭದ್ರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿಜೆಪಿ, ಸಮ್ಮಿಶ್ರ ಸರ್ಕಾರ ಉರುಳಿಸುವ ಯತ್ನ ನಡೆಸುತ್ತಿದೆ ಎಂಬ ಸುದ್ದಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ಬಿಜೆಪಿಯವರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನ ನಡೆಸುತ್ತಿದ್ದಾರೆ ನಿಜ. ಆದರೆ ನಮ್ಮ ಶಾಸಕರು ಯಾರೂ ಬಿಜೆಪಿಯತ್ತ ಮುಖ ಮಾಡುವುದಿಲ್ಲ. ಒಂದೊಮ್ಮೆ ಬಿಜೆಪಿ ನಮ್ಮ ಶಾಸಕರನ್ನು ಸೆಳೆದರೆ ನಮ್ಮ ಜತೆಯೂ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದು, ನಾವೂ ಅವರನ್ನು ಸೆಳೆಯುತ್ತೇವೆ ಎಂದರು.

ಇನ್ನು ಬೆಳಗಾವಿ ವಿಚಾರದ ಕುರಿತು ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಚರ್ಚೆ ನಡೆಸಲಾಗಿದ್ದು, ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಅವರು ಈಗಾಗಲೇ ಕಾಂಗ್ರೆಸ್ ನಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾದವರು. ಹಿರಿಯರು. ಹೀಗಾಗಿ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಬಿಡಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಸಂಪೂರ್ಣ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...