alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರ ಉರುಳಿಸಲು ಬಿಜೆಪಿ ಮುಂದಾಗಿರುವುದರ ಹಿಂದಿನ ‘ಕಾರಣ’ ಬಿಚ್ಚಿಟ್ಟ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆಯುತ್ತಿರುವ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಬೆಳವಣಿಗೆಗಳ ಹಿಂದಿನ ಕಾರಣ ಬಿಚ್ಚಿಟ್ಟಿದ್ದಾರೆ.

ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಬಳಿಕ ಬಹುಮತ ಸಾಬೀತುಪಡಿಸಲಾಗದೆ ರಾಜಿನಾಮೆ ನೀಡಿರುವ ಯಡಿಯೂರಪ್ಪನವರು, ಲೋಕಸಭಾ ಚುನಾವಣೆಯ ಬಳಿಕ ತಮಗೆ ಮುಂದೆಂದೂ ಮುಖ್ಯಮಂತ್ರಿಯಾಗುವ ಸಾಧ್ಯತೆ ಇಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್ ಶಾಸಕರುಗಳನ್ನು ಸೆಳೆದು ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಹವಣಿಸುತ್ತಿದ್ದಾರೆ. ಇದಕ್ಕಾಗಿ ಶಾಸಕರುಗಳಿಗೆ ಹಣ ಹಾಗೂ ಅಧಿಕಾರದ ಆಮಿಷ ಒಡ್ಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಬಿಜೆಪಿಯವರ ಈ ಪ್ರಯತ್ನ ಫಲಪ್ರದವಾಗುವುದಿಲ್ಲವೆಂದು ಹೇಳಿದ ದಿನೇಶ್ ಗುಂಡೂರಾವ್, ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜೊತೆ ಐವರು ಬಿಜೆಪಿ ಶಾಸಕರು ಮಾತುಕತೆ ನಡೆಸಿದ್ದು, ಜೆಡಿಎಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ. ಇಂತಹ ರಾಜಕಾರಣ ಬೇಡವೆಂಬ ಕಾರಣಕ್ಕೆ ನಾವುಗಳು ಸುಮ್ಮನಿದ್ದೇವೆ. ಜೆಡಿಎಸ್-ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ನಡೆಸುತ್ತಿದ್ದು, ಬಿಜೆಪಿಯವರು ಏನೇ ಪ್ರಯತ್ನ ನಡೆಸಿದರೂ ಸರ್ಕಾರ ಪತನವಾಗುವುದಿಲ್ಲ. ನಾವುಗಳು ಐದು ವರ್ಷ ಪೂರ್ಣ ಆಡಳಿತ ನಡೆಸುತ್ತೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...