alex Certify
ಕನ್ನಡ ದುನಿಯಾ       Mobile App
       

Kannada Duniya

ರೆಬೆಲ್ ಸ್ಟಾರ್ ಪುತ್ರನ ಚಿತ್ರಕ್ಕೆ ಪೊಲೀಸರು ತಡೆಯೊಡ್ಡಿದ್ದೇಕೆ…?

ಮಡಿಕೇರಿ: ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಗೌಡ ಚಿತ್ರದ ಶೂಟಿಂಗ್ ಗೆ ಪೊಲೀಸರು ತಡೆಯೊಡ್ಡಿದ್ದು, ಚಿತ್ರತಂಡದ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಅಭಿಷೇಕ್ ಗೌಡ ಹಾಗೂ ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಪುತ್ರ ಎಸ್‌. ಸಂದೇಶ್‌ ಅಭಿನಯದ ’ಅಮರ್‌’ ಚಿತ್ರದ ಶೂಟಿಂಗ್‌ ಮಡಿಕೇರಿಯಲ್ಲಿ ನಡೆಯುತ್ತಿದ್ದು, ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಚಿತ್ರೀಕರಣ ಭರದಿಂದ ಸಾಗಿತ್ತು.

ಆದರೆ ಚಿತ್ರ ತಂಡ ಈ ಭಾಗದಲ್ಲಿ ಚಿತ್ರೀಕರಣಕ್ಕೆ ಪೊಲೀಸರಿಂದ ಅನುಮತಿ ಪಡೆದಿರಲಿಲ್ಲ. ಜೊತೆಗೆ ಚಿತ್ರೀಕರಣದಿಂದಾಗಿ ಮಡಿಕೇರಿ-ಮೈಸೂರು ರಸ್ತೆಯಲ್ಲಿ ಟ್ರ್ಯಾಫಿಕ್ ಜಾಮ್ ಉಂಟಾಗಿ ವಾಹನಗಳು ರಸ್ತೆಯಲ್ಲೇ ಗಂಟೆಗಟ್ಟಲೇ ನಿಂತು ಪರದಾಡುವಂತಾಗಿದೆ. ಈ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಟ್ರಾಫಿಕ್‌ ನಿವಾರಿಸುವಂತೆ ಸೂಚಿಸಿದ್ದಾರೆ.

ಚಿತ್ರೀಕರಣದ ಸ್ಥಳಕ್ಕಾಗಮಿಸಿದ ಎಸ್‌ಐ ಷಣ್ಮುಗ ಮತ್ತು ಸಿಬ್ಬಂದಿ ಚಿತ್ರೀಕರಣಕ್ಕೆ ಪಡೆದಿರುವ ಅನುಮತಿ ಪತ್ರ ತೋರಿಸುವಂತೆ ತಿಳಿಸಿದ್ದಾರೆ. ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಹಾಗೂ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಚಿತ್ರ ತಂಡದ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಠಾಣೆಯಲ್ಲಿ ಚಿತ್ರತಂಡದಿಂದ ವಿವರ ಪಡೆದು, ಎಚ್ಚರಿಕೆ ಕೊಟ್ಟು ಬಿಡುಗಡೆ ಮಾಡಿ ಕಳುಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...