alex Certify
ಕನ್ನಡ ದುನಿಯಾ       Mobile App
       

Kannada Duniya

ಭರವಸೆ ಹಿನ್ನಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟ ಡಿ.ಕೆ. ರವಿ ಕುಟುಂಬ

DK_Raviದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನ ಕುರಿತಂತೆ ವರದಿ ಬಹಿರಂಗಪಡಿಸಲು ಒತ್ತಾಯಿಸಿ ವಿವಿಧ ಸಂಘ- ಸಂಸ್ಥೆಗಳಗೂಡಿ ಕಳೆದ ಏಳು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದ ಕುಟುಂಬಸ್ಥರು ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಂಡು ಸ್ವಗ್ರಾಮಕ್ಕೆ ತೆರಳಿದ್ದಾರೆ.

ಮಗ ಸಾವನ್ನಪ್ಪಿ ವರ್ಷ ಕಳೆದರೂ ಸಾವಿನ ರಹಸ್ಯ ಬಹಿರಂಗವಾಗದ ಹಿನ್ನಲೆಯಲ್ಲಿ ಡಿ.ಕೆ. ರವಿಯವರ ತಾಯಿ ಗೌರಮ್ಮ, ತಂದೆ ಕರಿಯಪ್ಪ ಹಾಗೂ ಸಹೋದರ ರಮೇಶ್ ಸೇರಿದಂತೆ ಹಲವರು, ವಿವಿಧ ಸಂಘ- ಸಂಸ್ಥೆಗಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಭರವಸೆ ನೀಡಿದ್ದರಾದರೂ ಅದನ್ನು ಈಡೇರಿಸದ ಕಾರಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕುಟುಂಬಸ್ಥರು ಮುಂದಾಗಿದ್ದರು.

ಅಧಿವೇಶನ ನಡೆಯುತ್ತಿದ್ದ ಹಿನ್ನಲೆಯಲ್ಲಿ ಅವರುಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಆಡಗೋಡಿಯ ಸಿಆರ್ ಮೈದಾನಕ್ಕೆ ಕರೆದೊಯ್ದಿದ್ದರು. ಆಹಾರ ಸ್ವೀಕರಿಸಲು ನಿರಾಕರಿಸಿದ ಗೌರಮ್ಮ ಮತ್ತಿತರರು ನ್ಯಾಯ ಸಿಗುವವರೆಗೂ ಕದಲುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಈ ಸಂದರ್ಭದಲ್ಲಿ ಅವರ ಮನವೊಲಿಸಿದ ಪೊಲೀಸ್ ಅಧಿಕಾರಿಗಳು ನಾಲ್ಕು ದಿನಗಳೊಳಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿಸುವುದಾಗಿ ತಿಳಿಸಿದ್ದಾರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮ್ಮ ಪ್ರತಿಭಟನೆ ಹಿಂಪಡೆದಿರುವ ಡಿ.ಕೆ. ರವಿಯವರ ಕುಟುಂಬ ಸ್ವಗ್ರಾಮ ದೊಡ್ಡಕೊಪ್ಪಲಿಗೆ ತೆರಳಿದ್ದು, ಭರವಸೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...