alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೆಬ್ಬಿಸಿದೆ ಡಿಕೆಶಿ ಹೇಳಿಕೆ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಕುರಿತಂತೆ ಸಚಿವ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಡಿ.ಕೆ. ಶಿವಕುಮಾರ್, ನಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ತಪ್ಪು ಮಾಡಿದೆ. ಈ ಕುರಿತು ಜನತೆ ನಮ್ಮನ್ನು ಕ್ಷಮಿಸಬೇಕು ಎಂದು ಹೇಳಿರುವುದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಸಿದ್ದ ಅಂದಿನ ಕಾಂಗ್ರೆಸ್ ಸರ್ಕಾರದ ಸಚಿವರುಗಳಾಗಿದ್ದ ಎಂ.ಬಿ. ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಅವರನ್ನು ಕೆರಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಂ.ಬಿ. ಪಾಟೀಲ್, ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಡಿ.ಕೆ. ಶಿವಕುಮಾರ್ ಯಾವ ಅರ್ಥದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೋ ತಿಳಿಯುತ್ತಿಲ್ಲ. ಶಿವಕುಮಾರ್ ಅವರಿಗೆ ಈ ವಿಚಾರದಲ್ಲಿ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ. ಅದನ್ನು ಬಿಟ್ಟು ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲವೆಂದಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...