alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಮಕ್ಕಳ ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ ಸಚಿವರು

DK_Shivakumar_ministerಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು ನಡೆದ 70 ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಶಾರದಾ ಸಂಸ್ಥೆಯ ಮಕ್ಕಳು ಮಾಡುತ್ತಿದ್ದ ನೃತ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅರ್ಧಕ್ಕೆ ನಿಲ್ಲಿಸಿದ ಘಟನೆ ನಡೆದಿದೆ.

ಧ್ವಜಾರೋಹಣ ನೆರವೇರಿಸಿದ ಸಚಿವ ಡಿ.ಕೆ. ಶಿವಕುಮಾರ್ ಅವರು, ಬಹುಮಾನ ವಿತರಿಸುತ್ತಿದ್ದ ವೇಳೆ ಮಕ್ಕಳು, ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ‘ಶಾಂತಿ ಕ್ರಾಂತಿ’ ಚಿತ್ರದ ‘ಹುಟ್ಟೋದ್ಯಾಕೆ ಸಾಯೋದ್ಯಾಕೆ’ ಎಂಬ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು.

ಈ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ, ಡಿವೈಎಸ್ಪಿ ಗಳಾದ ಕಲ್ಲಪ್ಪ ಹಂಡಿಭಾಗ್ ಹಾಗೂ ಎಂ.ಕೆ. ಗಣಪತಿಯವರ ಭಾವಚಿತ್ರಗಳನ್ನು ಮಕ್ಕಳು ಹಿಡಿದುಕೊಂಡಿದ್ದು, ಇದು ಸಚಿವರನ್ನು ಇರುಸುಮುರುಸಿಗೊಳಗಾಗುವಂತೆ ಮಾಡಿತೆನ್ನಲಾಗಿದೆ.

ಕೂಡಲೇ ಮಕ್ಕಳ ನೃತ್ಯವನ್ನು ನಿಲ್ಲಿಸುವಂತೆ ಸೂಚಿಸಿದ ಡಿ.ಕೆ. ಶಿವಕುಮಾರ್, ಡಿಡಿಪಿಐ ಶಿವಮಾದಪ್ಪರನ್ನು ಕರೆಸಿಕೊಂಡು ತರಾಟೆಗೆ ತೆಗೆದುಕೊಂಡರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...