alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಹಿ ಸುದ್ದಿ ನೀಡಿದ ಸಚಿವ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಂಬರುವ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಂಧನ ಸಚಿವ ಡಿಕೆ. ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ.

ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಮತ್ತು ಬೇಸಿಗೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ರಾಜ್ಯಕ್ಕೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗ್ತಿದೆ. ಕೊರತೆ ಕಂಡು ಬಂದಲ್ಲಿ ಖರೀದಿ ಮಾಡಲಾಗುವುದು. ಗ್ರಾಹಕರಿಗೆ ಕೊರತೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಗ್ರಿಡ್ ನಿಂದ ರಾಜ್ಯಕ್ಕೆ ಸಿಗಬೇಕಾದ ಹೆಚ್ಚುವರಿ ಪಾಲು ಸಿಗುತ್ತಿಲ್ಲ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ 1000 ಮೆ.ವ್ಯಾ. ವಿದ್ಯುತ್ ಖರೀದಿ ಮಾಡಲಾಗುತ್ತದೆ. ಹಿಂದೆ ಯೂನಿಟ್ ಗೆ 5.10 ರೂ. ದರದಲ್ಲಿ ಖರೀದಿ ಮಾಡಲಾಗುತ್ತಿತ್ತು. ಈಗ 4.08 ರೂ. ದರದಲ್ಲಿ ಏರಿಕೆ ಮಾಡಲಾಗ್ತಿದೆ ಎಂದು ಹೇಳಿದ್ದಾರೆ.

ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡುವ ಕುರಿತು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...