alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಸ್ಥಾನಕ್ಕೆ ಹೋಗಲೇಬಾರದಾ ಎಂದು ಪ್ರಶ್ನಿಸಿದ ಡಿಕೆಶಿ

ತಮಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದಕ್ಕೆ ಅಸಮಾಧಾನಗೊಂಡಿರುವುದಾಗಿ ಮಾಧ್ಯಮಗಳಲ್ಲಿ ಬಂದ ವರದಿಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾನು ಬದ್ಧ. ಎಲೆಕ್ಷನ್ ಮುಗಿದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದೆ. ನಾನು ದೇವಸ್ಥಾನಕ್ಕೆ ಹೋಗಲೇಬಾರದಾ ಎಂದು ಪ್ರಶ್ನಿಸಿದ್ದಾರೆ.

ದೇವಸ್ಥಾನಕ್ಕೆ ತೆರಳಿದ್ದ ಹಿನ್ನೆಲೆಯಲ್ಲಿ ಕೆಲ ಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಆದರೆ ಅಸಮಾಧಾನಗೊಂಡು ತಾವು ಹಾಜರಾಗಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೆಲ್ಲಾ ಸತ್ಯಕ್ಕೆ ದೂರವಾದ ಸಂಗತಿ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ತಾವು ಹೈಕಮಾಂಡ್ ಆದೇಶವನ್ನು ಪಾಲಿಸುವುದಾಗಿ ಹೇಳಿದರು.

ನಾನು ಯಾವತ್ತೂ ಅಧಿಕಾರದ ಬೆನ್ನು ಬಿದ್ದಿಲ್ಲ. ಯಾರು ಸಚಿವರಾಗಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಅಲ್ಲಿಯವರೆಗೆ ಕಾದು ನೋಡೋಣ ಎಂದು ಮಾರ್ಮಿಕವಾಗಿ ಶಿವಕುಮಾರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...