alex Certify
ಕನ್ನಡ ದುನಿಯಾ       Mobile App
       

Kannada Duniya

ಬಳ್ಳಾರಿಗೆ ಬಂದಿರುವುದರ ಹಿಂದಿನ ‘ಕಾರಣ’ ಬಿಚ್ಚಿಟ್ಟ ಡಿ.ಕೆ. ಶಿವಕುಮಾರ್

ನವೆಂಬರ್ 3 ರಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರ ಪರಸ್ಪರ ಕೆಸರೆರಚಾಟ ತಾರಕಕ್ಕೇರಿದೆ.

ಅದರಲ್ಲೂ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಣ, ಬಿಜೆಪಿಯ ಶ್ರೀರಾಮುಲು ಹಾಗೂ ಕಾಂಗ್ರೆಸ್ ನ ಡಿ.ಕೆ. ಶಿವಕುಮಾರ್ ಅವರ ನಡುವಿನ ವೈಯಕ್ತಿಕ ಕದನವಾಗಿ ಮಾರ್ಪಟ್ಟಿದ್ದು, ಉಭಯತ್ರರು ವೈಯಕ್ತಿಕ ವಾಗ್ದಾಳಿಗೆ ಮುಂದಾಗಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಉಸ್ತುವಾರಿಗೆ ನಿಂತಿರುವ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದ ಶ್ರೀರಾಮುಲು, ಹೊರಗಿನಿಂದ ಬಂದ ಶಿವಕುಮಾರ್ ಅವರಿಗೆ ಇಲ್ಲೇನು ಕೆಲಸ ಎಂದು ಪ್ರಶ್ನಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್, ನಾವು ವಾಲ್ಮೀಕಿ ಸಮುದಾಯವನ್ನು ತುಳಿಯಲು ಬಂದಿಲ್ಲ. ಬದಲಾಗಿ ಅದೇ ಸಮುದಾಯದವರಾದ ನಮ್ಮ ಅಭ್ಯರ್ಥಿ ವಿ.ಎಸ್. ಉಗ್ರಪ್ಪನವರನ್ನು ಗೆಲ್ಲಿಸಿಕೊಂಡು ಹೋಗಲು ಬಂದಿದ್ದೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...