alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ಕೆ.ಶಿ. ಕುರಿತ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಸಿ.ಎಂ. ಲಿಂಗಪ್ಪ

ರಾಜ್ಯ ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಅವರ ಬೆಂಬಲಿಗರ ಮೇಲೆ ಬಿಜೆಪಿ ಪಕ್ಷ ಕೇಂದ್ರ ಸರ್ಕಾರದ ಶಕ್ತಿ ಬಳಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಆರೋಪಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಸಹೋದರರು ಮತ್ತು ಅವರ ಆಪ್ತರ ಮನೆಗಳ ಮೇಲೆ ಇಂದು ಸಿಬಿಐ ದಾಳಿ ನಡೆಸಿದ ಹಿನ್ನೆಲೆಯಲ್ಲಿ ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಗುಜರಾತ್ ಶಾಸಕರನ್ನ ಬೆಂಗಳೂರಿನ ಈಗಲ್ಟನ್ ಹೋಟೆಲ್ ನಲ್ಲಿ ಇಟ್ಟಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಅಂದು ಅಮಿತ್ ಶಾ ಫೋನ್ ಮಾಡಿದ್ದರು. ’38 ಶಾಸಕರನ್ನ ನೀವೇ ಇಟ್ಟುಕೊಳ್ಳಿ, 4 ಶಾಸಕರನ್ನು ಮಾತ್ರ ನಮಗೆ ಕೊಡಿ’ ಎಂದು ಕೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಡಿ.ಕೆ‌.ಶಿ. ನಾನೊಬ್ಬ ಕಾಂಗ್ರೆಸ್ ನ ನಿಷ್ಠಾವಂತ, ನಾನು ಹಾಗೆ ಎಂದಿಗೂ ಮಾಡಲಾರೆ ಎಂದಿದ್ದರು. ನಂತರ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿ ಸೇರುವಂತೆ ಒತ್ತಡವನ್ನು ಹೇರಲಾಗಿತ್ತು ಎಂಬ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಗುಜರಾತ್ ಶಾಸಕರನ್ನು ರೆಸಾರ್ಟ್ನಲ್ಲಿ ಇಟ್ಟಿದ್ದ ಘಟನೆಯ ನಂತರ ಮೂರ್ನಾಲ್ಕು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿತ್ತು, ಮತ್ತು ಇಂದು ನಡೆಯುತ್ತಿರುವಂತಹ ಈ ಸಿಬಿಐ ದಾಳಿಯೂ ಕೂಡ ಬಿಜೆಪಿ ಪ್ರಾಯೋಜಿತ. ಡಿ.ಕೆ. ಶಿವಕುಮಾರ್ ವಿರುದ್ಧದ ವೈಯಕ್ತಿಕ ದ್ವೇಷದ ರಾಜಕಾರಣ ಇದಾಗಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...