alex Certify
ಕನ್ನಡ ದುನಿಯಾ       Mobile App
       

Kannada Duniya

ಕರುಣಾನಿಧಿ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

‘ಬದುಕಿರುವಾಗಲೇ ದಂತಕಥೆಯಂತಿದ್ದ’ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸಧೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ. ಹಲವು ಬಾರಿ ಕರುಣಾನಿಧಿ ಅವರನ್ನು ಭೇಟಿ ಮಾಡಿದ್ದೆ. ಪ್ರಾದೇಶಿಕ ಪಕ್ಷಗಳ ಮಹತ್ವವನ್ನು ಪ್ರತಿ ಬಾರಿಯೂ ನನಗೆ ಮನವರಿಕೆ ಮಾಡಿಕೊಡುತ್ತಿದ್ದರು. ಹಿಂದುಳಿದ ವರ್ಗ ಹಾಗೂ ತುಳಿತಕ್ಕೊಳಗಾದವರ ಬಗ್ಗೆ ಅವರು ತೆಗೆದುಕೊಂಡ ಜನಪ್ರಿಯ ಯೋಜನೆಗಳನ್ನು ಇಂದು ದೇಶದ ವಿವಿಧ ರಾಜ್ಯಗಳು ಅನುಕರಿಸುತ್ತಿವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್.ಡಿ. ದೇವೇಗೌಡ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಮ್ಮಿಶ್ರ ಸರ್ಕಾರದ ರಚನೆಗೆ ಕರುಣಾನಿಧಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಚಿತ್ರರಂಗದ ಮೂಲಕ ರಾಜಕೀಯಕ್ಕೆ ಬಂದು ತಮಿಳುನಾಡಿನ ಶೋಷಿತ ವರ್ಗಕ್ಕೆ ಗಟ್ಟಿದನಿ ನೀಡಿದ ಕರುಣಾನಿಧಿ ಅವರ ರಾಜಕೀಯ ಸಿದ್ಧಾಂತ ನಮಗೆಲ್ಲರಿಗೂ ಮಾದರಿ. ಅವರ ನಿಧನದಿಂದ ಭಾರತದ ರಾಜಕೀಯ ರಂಗದಲ್ಲಿ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವವೊಂದು ಕಣ್ಮರೆಯಾಗಿದೆ. ತಮಿಳುನಾಡು ಒಬ್ಬ ದಾರ್ಶನಿಕ ನಾಯಕನನ್ನು ಕಳೆದುಕೊಂಡಿದೆ” ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...