alex Certify
ಕನ್ನಡ ದುನಿಯಾ       Mobile App
       

Kannada Duniya

ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು

ಕೆಪಿಎಂಇ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ವೈದ್ಯರು ನಡೆಸುತ್ತಿರುವ ಮುಷ್ಕರ ಐದನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರದಂದು ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದ ವೈದ್ಯರು, ರೋಗಿಗಳಿಗೆ ತೊಂದರೆಯಾದ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಹೊರ ರೋಗಿಗಳ ವಿಭಾಗವನ್ನು ಪುನಾರಂಭಿಸಿದ್ದಾರೆ.

ಬೆಂಗಳೂರಿನ ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆ ವೈದ್ಯರು, ಪ್ರತಿಭಟನಾರ್ಥ ಕಪ್ಪು ಪಟ್ಟಿ ಧರಿಸಿ ಒಪಿಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿಕಿತ್ಸೆಗೆ ಆಗಮಿಸಿದ ರೋಗಿಗಳೂ ಹೊರ ರೋಗಿ ವಿಭಾಗ ಕಾರ್ಯ ನಿರ್ವಹಿಸುತ್ತಿರುವ ಕಾರಣ ಸಮಾಧಾನದ ನಿಟ್ಟುಸಿರುಬಿಟ್ಟಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೇಶ್ ಕುಮಾರ್, ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಕೆಲವೊಂದು ತಿದ್ದುಪಡಿಗಳೊಂದಿಗೆ ಕೆಪಿಎಂಇ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...