alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿ ಸೇರಿ ಐವರು ಅರೆಸ್ಟ್, ಕಾರಣ ಗೊತ್ತಾ…?

ಬೀದರ್: ಅಧಿಕಾರಿಗಳ ಸೋಗಿನಲ್ಲಿ ವೈದ್ಯರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವತಿ ಸೇರಿ ಐವರ ತಂಡವನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.

ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ(ಎಂ.ಸಿ.ಐ.)ನ ಇಂಟಲಿಜೆನ್ಸ್ ಅಧಿಕಾರಿಗಳೆಂದು ಹೇಳಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಈ ತಂಡ ಬೀದರ್ ನ ಇಬ್ಬರು ವೈದ್ಯರಿಗೆ ಹಣಕ್ಕೆ ಬೇಡಿಕೆ ಇಟ್ಟಿತ್ತು.

ಈ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ, ಸುನೀಲ್(31), ಜೀನಿತ್(25), ಪುನೀತ್(25), ಪ್ರಿಯದರ್ಶಿನಿ(40), ಮಂಜುಳಾ(26) ಅವರನ್ನು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ್ದ ಈ ತಂಡ ಬೀದರ್ ನಲ್ಲಿಯೇ ಕೆಲವು ದಿನಗಳಿಂದ ಉಳಿದುಕೊಂಡಿದ್ದು, ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾವಹಿಸಿತ್ತು. ಬಳಿಕ ವೈದ್ಯರನ್ನು ಸಂಪರ್ಕಿಸಿ ಬ್ಲಾಕ್ ಮೇಲ್ ಮಾಡಲಾಗಿತ್ತು. ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...