alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯರ ಮುಷ್ಕರ : ಏರುತ್ತಲೇ ಇದೆ ಸಾವಿನ ಸಂಖ್ಯೆ

ಕೆಪಿಎಂಇ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದು, ಸರ್ಕಾರ ಹಾಗೂ ವೈದ್ಯ ಸಂಘದ ಪದಾಧಿಕಾರಿಗಳ ನಡುವಣದ ಮಾತುಕತೆ ಫಲಪ್ರದವಾಗದ ಕಾರಣ ಮುಷ್ಕರ ಮುಂದುವರೆದಿದೆ.

ಇದರ ಮಧ್ಯೆ ಹಲವಾರು ಮಂದಿ ರೋಗಿಗಳು ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದು, ಅನಧಿಕೃತ ಅಂಕಿ-ಅಂಶಗಳ ಪ್ರಕಾರ ಇದುವರೆಗೂ 25 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ವೈದ್ಯರ ಮುಷ್ಕರ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆಯೂ ಹೈಕೋರ್ಟ್ ನ್ಯಾಯಮೂರ್ತಿಗಳು ಪ್ರಸಕ್ತ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ವೈದ್ಯರ ಮುಷ್ಕರದ ಕಾರಣಕ್ಕೆ ಈಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ 35 ವರ್ಷದ ರಾಜು ಕಾಡಪ್ಪನವರ್ ಸಾವನ್ನಪ್ಪಿದ್ದಾರೆ.

ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಸಂಬಂಧಿಕರು ತಕ್ಷಣವೇ ಚಿಕಿತ್ಸೆಗೆ ಕರೆದುಕೊಂಡು ಹಲವು ಆಸ್ಪತ್ರೆಗಳಿಗೆ ಕಾರಿನಲ್ಲಿ ಅಲೆದರಾದರೂ ಯಾವುದೇ ಖಾಸಗಿ ಆಸ್ಪತ್ರೆ ಲಭ್ಯವಾಗದ ಕಾರಣ ಅಂತಿಮವಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅಷ್ಟರಲ್ಲಾಗಲೇ ಕಾಲ ಮಿಂಚಿದ್ದು, ರಾಜು ಕಾಡಪ್ಪನವರ್ ಸಾವಿಗೀಡಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...