alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧೇಯಕ ವಿರೋಧಿಸಿ ವೈದ್ಯರ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ವಿರೋಧಿಸಿ ನಗರದಲ್ಲಿ ಇಂದು ವೈದ್ಯರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕವನ್ನು ಜಾರಿಗೆ ತರುವ ಮೂಲಕ ವೈದ್ಯರು, ಆಸ್ಪತ್ರೆ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಮುಂದಾಗಿದೆ ಎಂದು ವೈದ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಭಾರತೀಯ ವೈದ್ಯಕೀಯ ಮಂಡಳಿಯನ್ನು ಬದಲಾಯಿಸಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ನೂತನ ವಿಧೇಯಕದಲ್ಲಿ ಶೇ.60 ರಷ್ಟು ವೈದ್ಯಕೀಯ ಸೀಟಿನ ಶುಲ್ಕ ನಿಗದಿ ಮಾಡುವ ಅಧಿಕಾರವನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗಿದೆ. ಶೇ.40ರಷ್ಟು ವೈದ್ಯಕೀಯ ಸೀಟಿನ ಶುಲ್ಕ ನಿಗದಿ ಮಾಡುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವುದು ಕಷ್ಟವಾಗಲಿದ್ದು, ಅವರು ವೈದ್ಯರಾಗುವ ಕನಸಿಗೆ ತಣ್ಣೀರೆರಚಿದಂತಾಗುತ್ತದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...