alex Certify
ಕನ್ನಡ ದುನಿಯಾ       Mobile App
       

Kannada Duniya

ಖಾಸಗಿ ವೈದ್ಯರ ಮುಷ್ಕರದಿಂದ ರೋಗಿಗಳ ಪರದಾಟ

ಬೆಂಗಳೂರು:  ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂ ಸಿ) ವಿಧೇಯಕ ವಿರೋಧಿಸಿ 2 ಲಕ್ಷಕ್ಕೂ ಅಧಿಕ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದು, ಹೊರ ರೋಗಿಗಳ ವಿಭಾಗ ಬಂದ್ ಆಗಿರುವ ಕಾರಣ ರೋಗಿಗಳು ಪರದಾಡುವಂತಾಗಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುಷ್ಕರ ನಡೆಯಲಿದ್ದು, ತುರ್ತು ಸೇವಾ ವಿಭಾಗಗಳು ಮತ್ತು ಒಳ ರೋಗಿಗಳ ವಿಭಾಗದ ಸೇವೆ ಮುಂದುವರೆಯಲಿದೆ. ಆದರೆ ಸರ್ಕಾರಿ ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದಾರೆ.

ಕೇಂದ್ರ ಸರ್ಕಾರ ಭಾರತೀಯ ವೈದ್ಯಕೀಯ ಪರಿಷತ್ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ಮಾಡಲು 2016 ರ ತಿದ್ದುಪಡಿ ವಿದೇಯಕ ಮಂಡನೆಗೆ ಮುಂದಾಗಿದೆ. ಇದು ಅವೈಜ್ಞಾನಿಕ ತಿದ್ದುಪಡಿಯಾಗಿದ್ದು, ಇದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಗಗನಕುಸುಮವಾಗಲಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...