alex Certify
ಕನ್ನಡ ದುನಿಯಾ       Mobile App
       

Kannada Duniya

ಗೌರಿ ಹತ್ಯೆ ಆರೋಪಿ ಜೊತೆಗಿನ ಮುತಾಲಿಕ್ ಫೋಟೋ ವೈರಲ್

ಕಳೆದ ವರ್ಷದ ಸೆಪ್ಟಂಬರ್ ನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದ ಎದುರು ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು ಪ್ರಮುಖ ಆರೋಪಿ ವಿಜಯಪುರ ಜಿಲ್ಲೆ ಸಿಂದಗಿಯ ಪರಶುರಾಮ್ ವಾಗ್ಮೋರೆ ಎಂಬಾತನನ್ನು ಬಂಧಿಸಿದ್ದಾರೆ.

ಈತನೇ ಗೌರಿ ಲಂಕೇಶ್ ಅವರ ಮೇಲೆ ಗುಂಡು ಹಾರಿಸಿದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದ್ದು, ಪೊಲೀಸರ ವಿಚಾರಣೆ ವೇಳೆ ಪರಶುರಾಮ್ ಸಹ ಇದನ್ನು ಒಪ್ಪಿಕೊಂಡಿದ್ದಾನೆಂದು ತಿಳಿದು ಬಂದಿದೆ. ಆದರೆ ಕೃತ್ಯಕ್ಕೆ ಬಳಸಿದ ಗನ್ ಕುರಿತು ಹೆಚ್ಚಿನ ಮಾಹಿತಿ ನೀಡುತ್ತಿಲ್ಲವೆನ್ನಲಾಗಿದ್ದು, ಶೂಟ್ ಮಾಡಿದ ಬಳಿಕ ಅದನ್ನು ಬೇರೊಬ್ಬರು ಪಡೆದುಕೊಂಡರು. ಅವರ್ಯಾರು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾನೆನ್ನಲಾಗಿದೆ.

ಈ ಮಧ್ಯೆ ಹತ್ಯೆ ಆರೋಪಿ ಪರಶುರಾಮ್ ಜೊತೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ಪರಶುರಾಮ್ ಯಾರೋ ನನಗೆ ಗೊತ್ತಿಲ್ಲ. ನನ್ನೊಂದಿಗೆ ಹಲವರು ಸೆಲ್ಫಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಂದು ಎಲ್ಲರ ವಿವರವನ್ನು ತಿಳಿದುಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...