alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಹಾಡಹಗಲೇ ಅತ್ತೆ- ಸೊಸೆಯ ಹತ್ಯೆ

Murder_344555ಹಾಡಹಗಲೇ ಮನೆಯೊಂದಕ್ಕೆ ನುಗ್ಗಿರುವ ದುಷ್ಕರ್ಮಿಗಳು ಅತ್ತೆ- ಸೊಸೆಯನ್ನು ಹತ್ಯೆ ಮಾಡಿದ್ದಾರೆ. ಬೆಂಗಳೂರಿನ ವಸಂತ ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ಸಂತೋಷಿ ಬಾಯಿ ಹಾಗೂ ಅವರ ಸೊಸೆ 30 ವರ್ಷದ ಲತಾ ಹತ್ಯೆಯಾದವರಾಗಿದ್ದಾರೆ.

ಇಂದು ಬೆಳಿಗ್ಗೆ 9 ರಿಂದ 10 ಗಂಟೆಯೊಳಗೆ ಈ ಕೃತ್ಯ ನಡೆದಿರಬಹುದೆಂದು ಹೇಳಲಾಗಿದ್ದು, ಮಾರಕಾಸ್ತ್ರದಿಂದ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಕೊಲೆಯಾದ ಮಹಿಳೆಯರಿಬ್ಬರ ಮೈ ಮೇಲಿನ ಚಿನ್ನಾಭರಣಗಳು ಹಾಗೆಯೇ ಇದ್ದು, ಹಳೆ ದ್ವೇಷದ ಹಿನ್ನಲೆಯನ್ನು ಈ ಕೃತ್ಯ ನಡೆದಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳು ಹಿಂಬದಿ ಬಾಗಿಲಿನಿಂದ ಒಳ ಪ್ರವೇಶಿಸಿದ್ದಾರೆಂದು ಹೇಳಲಾಗುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...