alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿ ಕೇಂದ್ರ ಬರ ಅಧ್ಯಯನ ತಂಡ ಪ್ರವಾಸ

draught

ಬೆಂಗಳೂರು: ರಾಜ್ಯದಲ್ಲಿ 113 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನೂ 23 ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವುದರಿಂದ ನೆರವು ನೀಡಬೇಕೆಂದು ಮನವಿ ಮಾಡಿದ್ದು, ಈ ಹಿನ್ನಲೆಯಲ್ಲಿ ಕೇಂದ್ರದ ವಿವಿಧ ಅಧಿಕಾರಿಗಳ ತಂಡ ಇಂದಿನಿಂದ ಬರ ಅಧ್ಯಯನ ಪ್ರವಾಸ ಕೈಗೊಂಡಿದೆ. ಕೇಂದ್ರ ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಎ. ನೀರಜ್ ನೇತೃತ್ವದಲ್ಲಿ 3 ತಂಡಗಳು ವಿವಿಧ ಜಿಲ್ಲೆಗಳಲ್ಲಿ ಬರ ಅಧ್ಯಯನ ನಡೆಸಲಿವೆ.

ಎಣ್ಣೆ ಬೀಜ ನಿಗಮದ ನಿರ್ದೇಶಕ ಎಸ್. ಎಂ. ಕೊಲ್ಸತ್ಕರ್, ವಿದ್ಯುತ್ ನಿಗಮದ ನಿರ್ದೇಶಕ ಕಮಲ್ ಅವರ ನೇತೃತ್ವದ ತಂಡ ಕೂಡ ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ವೀಕ್ಷಿಸಿ ವರದಿ ಸಿದ್ಧಪಡಿಸಲಿದೆ.

ಮೊದಲಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಟಿಯಾ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದು, 4 ದಿನಗಳ ಕಾಲ 3 ತಂಡಗಳು ರಾಜ್ಯದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿವೆ. ಬರಗಾಲದಿಂದಾಗಿ ಸುಮಾರು 11 ಸಾವಿರ ಕೋಟಿ ನಷ್ಟವಾಗಿರುವ ಅಂದಾಜಿದ್ದು, ಕೇಂದ್ರದಿಂದ ನೆರವು ಪಡೆಯಲು ಈ ಅಧ್ಯಯನ ಪ್ರವಾಸ ಪೂರಕವಾಗಲಿದೆ. ಕೇಂದ್ರ ತಂಡಕ್ಕೆ ಅಗತ್ಯ ಮಾಹಿತಿ ಒದಗಿಸಲು ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...