alex Certify
ಕನ್ನಡ ದುನಿಯಾ       Mobile App
       

Kannada Duniya

ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮತ್ತೊಬ್ಬರು ಇಂದು ಸಾವಿಗೀಡಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 5 ಕ್ಕೇರಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮೈದೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಮಂಜಪ್ಪ ಇಂದು ಸಾವನ್ನಪ್ಪಿದ್ದಾರೆ.

ನಿರ್ಲಕ್ಷ್ಯದ ಕಾರಣಕ್ಕೆ ಪಿಡಿಓ ರನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ಅಮಾನತು ಮಾಡಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಗ್ರಾಮದ 40 ಕ್ಕೂ ಅಧಿಕ ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವರದಿಯಾಗುತ್ತಿದ್ದಂತೆಯೇ ಜಿಲ್ಲಾಡಳಿತ ಹಾಗೂ ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...