alex Certify
ಕನ್ನಡ ದುನಿಯಾ       Mobile App
       

Kannada Duniya

ಅನೈತಿಕ ಸಂಬಂಧದ ಜೋಡಿಗೆ ಅರೆಬೆತ್ತಲೆಗೊಳಿಸಿ ವೀಡಿಯೋ ತೆಗೆದರು

iphone-6.vresize.1200.675.high.10

ಅನೈತಿಕ ಸಂಬಂಧದ ಆರೋಪದ ಮೇಲೆ ಮಹಿಳೆ ಹಾಗೂ ಯುವಕನನ್ನು ಥಳಿಸಿದ ಗ್ರಾಮಸ್ಥರ ಗುಂಪು ಅರೆ ಬೆತ್ತಲೆ ಮಾಡಿದ ಘಟನೆ ಕೊಪ್ಪಳ ಸಮೀಪದ ಕುಣಿಕೇರಿ ತಾಂಡಾದಲ್ಲಿ ನಡೆದಿದೆ. ಮನೆಯಲ್ಲಿ ಮಹಿಳೆ ಹಾಗೂ ಯುವಕ ಜೊತೆಗಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಲಾಗಿದೆ.

ಕೊಪ್ಪಳ ತಾಲ್ಲೂಕಿನ ಬಂಡಿ ಹರ್ಲಾಪುರ ಗ್ರಾಮದ ಯುವಕ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕುಣಿಕೇರಿ ತಾಂಡಾದ ನಿವಾಸಿ, ಗಂಡನಿಂದ ದೂರವಾಗಿದ್ದ ಮಹಿಳೆಯೊಂದಿಗೆ ಸಲುಗೆಯಿಂದ ಇದ್ದ. ಆಗಾಗ ಆಕೆಯ ಮನೆಗೆ ಬಂದು ಹೋಗುತ್ತಿದ್ದ. ಕೆಲವು ದಿನಗಳ ಬಳಿಕ ಪ್ರತಿದಿನ ಆ ಮಹಿಳೆಯ ಮನೆಗೆ ಬಂದು ಹೋಗುತ್ತಿದ್ದ ಯುವಕನ ಬಗ್ಗೆ ಗ್ರಾಮದ ಕೆಲವರು ಅಕ್ರಮ ಸಂಬಂಧದ ಕಾರಣಕ್ಕೆ ಬಂದು ಹೋಗುತ್ತಿದ್ದಾನೆಂದು ಭಾವಿಸಿದ್ದಾರೆ. ಅವರು ಮನೆಯಲ್ಲಿ ಜೊತೆಗಿದ್ದಾಗಲೇ ದಾಳಿ ಮಾಡಿದ್ದಾರೆ.

ಇಬ್ಬರನ್ನು ಅರೆಬೆತ್ತಲೆ ಮಾಡಿ ಥಳಿಸಿದ್ದಲ್ಲದೇ, ಮೈಮೇಲೆ ನೀರು ಸುರಿದು ಮನೆಯೊಳಗೆ ಕೂಡಿಹಾಕಿದ್ದಾರೆ. ಬಳಿಕ ಅವರನ್ನು ಗ್ರಾಮದ ದೇವಾಲಯದ ಕಂಬಕ್ಕೆ ಕಟ್ಟಿಹಾಕಿದ್ದು, ಕೆಲವರು ತಮ್ಮ ಮೊಬೈಲ್ ನಲ್ಲಿ ಈ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಪ್ಪಳ ಗ್ರಾಮಾಂತರ ಠಾಣೆಯ ಪೊಲೀಸರು ಅವರನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...