alex Certify
ಕನ್ನಡ ದುನಿಯಾ       Mobile App
       

Kannada Duniya

ತಾವನುಭವಿಸಿದ ವೇದನೆಯನ್ನು ಸದನದಲ್ಲಿ ಬಿಚ್ಚಿಟ್ಟ ಬಿಜೆಪಿ ಶಾಸಕ

ವಿಧಾನಸಭೆಯಲ್ಲಿಂದು ಮಹತ್ವಪೂರ್ಣ ಚರ್ಚೆ ನಡೆದಿದೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಪಿಡುಗಾಗಿ ಪರಿಣಮಿಸುತ್ತಿರುವ ಡ್ರಗ್ಸ್ ದಂಧೆ ಕುರಿತು ಪಕ್ಷಬೇಧ ಮರೆತು ಶಾಸಕರುಗಳು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಕಳಕಪ್ಪ ಬಂಡಿ ತಾವನುಭವಿಸಿದ ವೇದನೆಯನ್ನು ಸದನದಲ್ಲಿ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ಕಾಲೇಜಿಗೆ ಸೇರ್ಪಡೆಗೊಂಡಿದ್ದ ತಮ್ಮ ಪುತ್ರ ಕೆಲದಿನಗಳಲ್ಲೇ ಡ್ರಗ್ಸ್ ಚಟ ಅಂಟಿಸಿಕೊಂಡಿದ್ದ ಎಂದು ಹೇಳಿದ ಅವರು, ಆರು ತಿಂಗಳ ಬಳಿಕ ತಮಗೆ ವಿಚಾರ ತಿಳಿಯಿತು. ಅದರಿಂದ ಆತನನ್ನು ಹೊರತರಲು ಬಹಳಷ್ಟು ಕಷ್ಟಪಡಬೇಕಾಯಿತು ಎಂದು ಹೇಳಿದರು. ಇಂತಹ ಪರಿಸ್ಥಿತಿ ಯಾರಿಗೂ ಬರಬಾರದೆಂದ ಕಳಕಪ್ಪ ಬಂಡಿ, ಸಮಾಜಕ್ಕೆ ಪಿಡುಗಾಗಿ ಪರಿಣಮಿಸಿರುವ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಾದ ಜಿ. ಪರಮೇಶ್ವರ್ ಮಾತನಾಡಿ, ಬೆಂಗಳೂರಿಗೆ ಡ್ರಗ್ಸ್ ಕಾಲಿಟ್ಟಿರುವುದು ಇದೇ ಮೊದಲೇನಲ್ಲ. ಮೂವತ್ತು ವರ್ಷಗಳ ಹಿಂದೆ ತಾವು ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ವಿದ್ಯಾರ್ಥಿಯೊಬ್ಬ ಈ ವ್ಯಸನಕ್ಕೆ ದಾಸನಾಗಿದ್ದ ಎಂದರಲ್ಲದೆ ಕರ್ನಾಟಕವನ್ನು ಯಾವುದೇ ಕಾರಣಕ್ಕೂ ಪಂಜಾಬ್ ಆಗಲು ಬಿಡುವುದಿಲ್ಲ. ಡ್ರಗ್ಸ್ ದಂಧೆಕೋರರನ್ನು ಮಟ್ಟಹಾಕಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸದನಕ್ಕೆ ಭರವಸೆ ನೀಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...