alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಡ್ನಾಪ್ ಕೇಸ್ ನಲ್ಲಿ ದುನಿಯಾ ವಿಜಯ್ ಗೆ 14 ದಿನಗಳ ಕಾಲ ಜೈಲೇ ಗತಿ

ಜಿಮ್ ಟ್ರೈನರ್ ಮಾರುತಿ ಗೌಡ ಎಂಬವರ ಮೇಲೆ ಹಲ್ಲೆ ನಡೆಸಿ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಮತ್ತವರ ಸಹಚರರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರುತಿ ಗೌಡನ ಮೇಲೆ ಹಲ್ಲೆ ನಡೆಸಿದ್ದ ದುನಿಯಾ ವಿಜಯ್, ಪ್ರಸಾದ್, ಮಣಿ ಮೊದಲಾದವರನ್ನು ಬಂಧಿಸಿದ್ದ ಹೈ ಗ್ರೌಂಡ್ಸ್ ಠಾಣೆ ಪೊಲೀಸರು, ವಿಚಾರಣೆ ಬಳಿಕ ಇಂದು ಕೋರಮಂಗಲದ ಎನ್.ಜಿ.ವಿ. ಬಳಿ ಇರುವ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಹೇಶ್ ಬಾಬು ಅವರ ನಿವಾಸದಲ್ಲಿ ಹಾಜರುಪಡಿಸಿದ್ದರು.

ಈ ವೇಳೆ ನ್ಯಾಯಾಧೀಶರು ದುನಿಯಾ ವಿಜಿ ಮತ್ತಿತರರಿಗೆ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ಹೀಗಾಗಿ ದುನಿಯಾ ವಿಜಯ್ ಜಾಮೀನು ಸಿಗುವವರೆಗೂ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾಗಬೇಕಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...