alex Certify
ಕನ್ನಡ ದುನಿಯಾ       Mobile App
       

Kannada Duniya

ದುನಿಯಾ ವಿಜಿಗಿಲ್ಲ ಜಾಮೀನು; ಇನ್ನೂ ಕೆಲ ದಿನ ಜೈಲೇ ಖಾಯಂ

 

ಜಿಮ್ ಟ್ರೈನರ್ ಮಾರುತಿ ಗೌಡರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ನಟ ದುನಿಯಾ ವಿಜಯ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಕಾರಣ ಅವರು ಇನ್ನೂ ಕೆಲ ದಿನ ಜೈಲಿನಲ್ಲೇ ಇರಬೇಕಾಗಿದೆ.

ಹಲ್ಲೆ ಮತ್ತು ಅಪಹರಣ ಪ್ರಕರಣದಲ್ಲಿ ದುನಿಯಾ ವಿಜಯ್ ಮತ್ತವರ ಸಹಚರರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.

ಜಾಮೀನು ಅರ್ಜಿ ವಜಾಗೊಂಡ ತೀರ್ಪು ಪ್ರಕಟವಾಗುತ್ತಿದ್ದಂತೆ ದುನಿಯಾ ವಿಜಯ್ ನಿರಾಸೆಗೊಂಡಿದ್ದಾರೆ. ಭಾನುವಾರದಂದು ದುನಿಯಾ ವಿಜಯ್ ಅವರನ್ನು 8 ನೇ ಎಸಿಎಂಎಂ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ ವೇಳೆ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿತ್ತು. ಆ ಬಳಿಕ ಜಾಮೀನು ಕೋರಿ ದುನಿಯಾ ವಿಜಯ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...