alex Certify
ಕನ್ನಡ ದುನಿಯಾ       Mobile App
       

Kannada Duniya

ದುನಿಯಾ ವಿಜಯ್ ಗಾಗಿ ಪೊಲೀಸರ ಹುಡುಕಾಟ

ಚಲನಚಿತ್ರ ನಟ ದುನಿಯಾ ವಿಜಯ್ ಹಾಗೂ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ ಗೌಡ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮಾಸ್ತಿಗುಡಿ ಚಲನಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಸಂಭವಿಸಿದ ಅವಘಡಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ ಗೌಡ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸುಂದರ ಗೌಡ ಅವರ ಮನೆಗೆ ಹೋದ ಸಂದರ್ಭದಲ್ಲಿ ಬಟ್ಟೆ ಬದಲಾಯಿಸಿಕೊಂಡು ಬರುವುದಾಗಿ ಸುಂದರ್ ಗೌಡ ತಿಳಿಸಿ ಒಳ ಹೋಗಿದ್ದರು. ಪೊಲೀಸರು ಅವರ ಹಿಂದೆಯೇ ಹೋದಾಗ ಸುಂದರ್ ಗೌಡ ಮನೆಯಲ್ಲಿಯೇ ಇದ್ದ ದುನಿಯಾ ವಿಜಯ್, ಅವರು ಬರುವವರೆಗೂ ಕಾಯಿರಿ ಎಂದು ಹೇಳಿದ್ದರು.

ಅಲ್ಲದೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಜೊತೆಗೆ ಸುಂದರ್ ಗೌಡ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದು, ಅವರನ್ನು  ಠಾಣೆಗೆ ಕರೆದುಕೊಂಡು ಬರುವುದಾಗಿ ಹೇಳಿದ್ದ ವಿಜಯ್ ಅವರೂ ಸಹ ಈಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇಬ್ಬರ ಫೋನ್ ನಂಬರ್ ಗಳು ಸಹ ಸ್ವಿಚ್ ಆಫ್ ಆಗಿದ್ದು, ಮೊಬೈಲ್ ನೆಟ್ವರ್ಕ್ ಮುಖಾಂತರ ದುನಿಯಾ ವಿಜಯ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...