alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ನ್ಯೂಸ್: ಮೋದಿ ಸರ್ಕಾರದ ಮತ್ತೊಬ್ಬ ಸಚಿವನ ವಿರುದ್ಧ ‘ಮೀ ಟೂ’ ಆರೋಪ

ಹಾಲಿವುಡ್ ನಿಂದ ಆರಂಭವಾದ ಪುರುಷರ ಲೈಂಗಿಕ ಕಿರುಕುಳ ವಿರುದ್ಧದ ‘ಮೀ ಟೂ’ ಆಂದೋಲನ ಬಳಿಕ ಬಾಲಿವುಡ್ ಗೆ ಕಾಲಿಟ್ಟಿದ್ದು, ಇದೀಗ ಚಿತ್ರರಂಗ ಮಾತ್ರವಲ್ಲದೆ ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರವನ್ನೂ ಪ್ರವೇಶಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಜೆ. ಅಕ್ಬರ್, ಈ ಹಿಂದೆ ತಮ್ಮ ಪತ್ರಿಕಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಮೋದಿ ಸರ್ಕಾರದ ಮತ್ತೊಬ್ಬ ಸಚಿವ ಡಿ.ವಿ. ಸದಾನಂದಗೌಡ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಬಾಗಲಕೋಟೆ ಮೂಲದ ಮಾಧುರಿ ಮುಧೋಳ್ ಎಂಬವರು ತಾವು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ಸದಾನಂದ ಗೌಡ ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದರೆಂಬ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕ ಮೂಲದ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದಗೌಡರ ವಿರುದ್ಧ ಇಂತಹ ಒಂದು ಆರೋಪ ಕೇಳಿ ಬಂದಿರುವುದು ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...