alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತೂ ಇಂತು ದಾಖಲಾಯ್ತು ಎಫ್.ಐ.ಆರ್.

kj j

ಮಡಿಕೇರಿ: ಮಂಗಳೂರು ಐ.ಜಿ. ಕಚೇರಿ ಡಿ.ವೈ.ಎಸ್.ಪಿ.ಯಾಗಿದ್ದ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಹಾಗೂ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ, ಎ.ಎಂ. ಪ್ರಸಾದ್ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ.

ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ನಂ.89/2016 ಅಡಿ ಎಫ್.ಐ.ಆರ್. ದಾಖಲಿಸಲಾಗಿದೆ. ಜಾರ್ಜ್ ಅವರು ಮೊದಲ ಆರೋಪಿಯಾಗಿದ್ದು, ಮೊಹಾಂತಿ 2ನೇ ಹಾಗೂ ಪ್ರಸಾದ್ 3ನೇ ಆರೋಪಿಯಾಗಿದ್ದಾರೆ. ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಿದ್ದವು. ಗಣಪತಿ ಕುಟುಂಬದವರು ಎಫ್.ಐ.ಆರ್.ದಾಖಲಿಸಲು ಮನವಿ ಮಾಡಿದ್ದರಾದರೂ ಕೇಸ್ ದಾಖಲಾಗಿರಲಿಲ್ಲ.

ಅದಾದ ನಂತರ, ಮಡಿಕೇರಿ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದು ಕೇಸ್ ದಾಖಲಿಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ಜಾರ್ಜ್ ರಾಜೀನಾಮೆ ನೀಡಿದ್ದರು. ಹಲವು ಸಂಘಟನೆಗಳ ಎಫ್.ಐ,ಆರ್ ದಾಖಲಿಸಲು ಒತ್ತಾಯಿಸಿ, ಪ್ರತಿಭಟನೆ ನಡೆಸಿದ್ದವು. ಇದೀಗ ಮೂವರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...