alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೂ ಹೋರಾಟ

shettar

ಬೆಂಗಳೂರು: ಮಂಗಳೂರು ಐ.ಜಿ.ಕಚೇರಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್, ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ವಿಧಾನಮಂಡಲದಲ್ಲಿ ಪ್ರತಿಪಕ್ಷಗಳ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಜಾರ್ಜ್ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಬೇಕು. ಹೆಸರಿಸಲಾದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹಾಗೂ ಜೆ.ಡಿ.ಎಸ್.ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್.ಶಾಸಕರು ಹೋರಾಟ ಕೈಗೊಂಡಿದ್ದಾರೆ. ಸದನದಲ್ಲಿ 2 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ರಾತ್ರಿ ವಿಧಾನ ಸೌಧ ಸುತ್ತಲೂ ಪಾದಯಾತ್ರೆ ನಡೆಸಿದ ಶಾಸಕರು, ಸದನದಲ್ಲಿಯೇ ರಾತ್ರಿ ಕಳೆದರು. ಬೆಳಿಗ್ಗೆ ವಾಕಿಂಗ್ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು, ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಯಲಿದೆ. ಒಂದುವೇಳೆ ಅಧಿವೇಶನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರೂ, ವಿಧಾನಮಂಡಲದ ಹೊರಗೆ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...