alex Certify
ಕನ್ನಡ ದುನಿಯಾ       Mobile App
       

Kannada Duniya

ಸದನದಲ್ಲಿ ಧರಣಿ ಕೈ ಬಿಟ್ಟ ಬಿಜೆಪಿ

ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಡೆಸುತ್ತಿದ್ದ ಧರಣಿಯನ್ನು ಕೈಬಿಡಲಾಗಿದ್ದು, ಇದರಿಂದಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಸದನ ಕಲಾಪ ಸುಗಮವಾದಂತಾಗಿದೆ.

ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಸದನದ ಬಾವಿಯೊಳಗಿಳಿದು ಬಿಜೆಪಿ ಸದಸ್ಯರು ಪ್ರತಿಭಟಿಸಿದ್ದು, ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಗಣಪತಿ ಆತ್ಮಹತ್ಯೆ ಮಾಡಿಕೊಂಡ ಲಾಡ್ಜ್ ನಲ್ಲಿ ಗುಂಡು ಸಿಕ್ಕಿದೆ ಎಂದ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಜಾರ್ಜ್ ರಾಜೀನಾಮೆ ನೀಡುವ ಮೂಲಕ ಸುಗಮ ತನಿಖೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಅಲ್ಲದೇ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸದನದಲ್ಲಿ ಚರ್ಚಿಸಲು ಅನುವು ಮಾಡಿಕೊಡಬೇಕೆಂದು ಸ್ಪೀಕರ್ ಕೆ.ಬಿ. ಕೋಳಿವಾಡ ಅವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸ್ಪೀಕರ್, ಈ ಕುರಿತು ನೋಟೀಸ್ ನೀಡಿದರೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ತಮ್ಮ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಜಗದೀಶ್ ಶೆಟ್ಟರ್ ಹೇಳಿದರು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...