alex Certify
ಕನ್ನಡ ದುನಿಯಾ       Mobile App
       

Kannada Duniya

ನ್ಯಾಯಾಂಗ ತನಿಖೆಗೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ

ganapathy madikeri dyspಮಡಿಕೇರಿಯ ವಸತಿ ಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿ ಕಛೇರಿಯ ಡಿ.ವೈ.ಎಸ್.ಪಿ., ಎಂ.ಕೆ. ಗಣಪತಿಯವರ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೊಪ್ಪಿಸಿದೆ.

ವಿಧಾನಸಭೆಯಲ್ಲಿ ಸುದೀರ್ಘ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ, ಸರ್ಕಾರಕ್ಕೆ ಸಿಐಡಿ ಮೇಲೆ ವಿಶ್ವಾಸವಿದ್ದರೂ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಯಲಿ ಎಂಬ ಉದ್ದೇಶದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸುವುದಾಗಿ ಘೋಷಿಸಿದರು.

ಆರು ತಿಂಗಳೊಳಗಾಗಿ ತನಿಖಾ ವರದಿ ನೀಡುವಂತೆ ಸೂಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸುತ್ತಿದ್ದಂತೆಯೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರಲ್ಲದೇ ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...