alex Certify
ಕನ್ನಡ ದುನಿಯಾ       Mobile App
       

Kannada Duniya

DYSP ಗಣಪತಿ ಪ್ರಕರಣ, ಜಾರ್ಜ್ ಗೆ ಕ್ಲೀನ್ ಚಿಟ್…?

ಬೆಂಗಳೂರು: ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ನೇಮಿಸಿದ್ದ ನ್ಯಾ. ಕೆ.ಎನ್. ಕೇಶವನಾರಾಯಣ ನೇತೃತ್ವದ ಆಯೋಗ ಇಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವರದಿಯನ್ನು ಸಲ್ಲಿಸಿದೆ.

ಈ ವರದಿಯಲ್ಲಿಯೂ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಡಿಕೇರಿಯ ಲಾಡ್ಜ್ ನಲ್ಲಿ ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರು ಆತ್ಮಹತ್ಯೆಗೆ ಮೊದಲು ಸಚಿವ ಜಾರ್ಜ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದರು. ಸಿ.ಐ.ಡಿ. ತನಿಖೆ ನಡೆಸಿ ಜಾರ್ಜ್ ಹಾಗೂ ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎನ್ನಲಾಗ್ತಿದೆ.

ಇಂದು ಕೇಶವನಾರಾಯಣ ನೇತೃತ್ವದ ಆಯೋಗ ವರದಿ ನೀಡಿದ್ದು, ವರದಿಯ ಬಗ್ಗೆ ಪರಿಶೀಲನೆ ನಡೆಸಿ, ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

320 ಪುಟಗಳ ವರದಿಯನ್ನು ನೀಡಲಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ನ್ಯಾ. ಕೇಶವನಾರಾಯಣ ತಿಳಿಸಿದ್ದಾರೆ. ತಮ್ಮ ವಿರುದ್ಧ ಆರೋಪ ಕೇಳಿ ಬಂದ ಸಂದರ್ಭದಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಿದ್ದರು. ಕ್ಲೀನ್ ಚಿಟ್ ನೀಡಿದ ಬಳಿಕ ಮತ್ತೆ ಸಚಿವರಾಗಿದ್ದರು. ತಾವು ಯಾವುದೇ ತನಿಖೆಗೆ ಸಿದ್ಧವೆಂದು ಅವರು ತಿಳಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...