alex Certify
ಕನ್ನಡ ದುನಿಯಾ       Mobile App
       

Kannada Duniya

ವರುಣಾ ಕ್ಷೇತ್ರದ ಭೇಟಿಗೂ ಮೊದಲು ಪೂಜೆ ಸಲ್ಲಿಸಿದ ಬಿ.ಎಸ್.ವೈ. ಪುತ್ರ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ಅವರ ಪುತ್ರ ಡಾ. ಯತೀಂದ್ರ ಕಣಕ್ಕಿಳಿಯಲಿದ್ದಾರೆ.

ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈಗಾಗಲೇ ಬಿರುಸಿನ ಪ್ರಚಾರ ನಡೆಸಿದ್ದಾರೆ. ವರುಣಾದಲ್ಲಿ ಪುತ್ರನ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ವರುಣಾ ಕ್ಷೇತ್ರ ಈ ಬಾರಿ ಜಿದ್ದಾಜಿದ್ದಿನ ಕಣವಾಗಲಿದೆ. ಯತೀಂದ್ರ ಅವರ ಎದುರು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರರು ವರುಣಾದಲ್ಲಿ ಮುಖಮುಖಿಯಾಗಲಿದ್ದಾರೆ.

ವಿಜಯೇಂದ್ರ ವರುಣಾ ಕ್ಷೇತ್ರಕ್ಕೆ ಭೇಟಿ ನೀಡುವ ಮೊದಲು ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ, ಮಲೆಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮೈಸೂರಿಗೆ ಆಗಮಿಸಿ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಅವರ ಸ್ವಾಗತಕ್ಕೆ ಪಕ್ಷದ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...