alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರದಪುಡಿ ಎರಚಿ ಬಿ.ಜೆ.ಪಿ. ಬಂಡಾಯ ಅಭ್ಯರ್ಥಿ ಮೇಲೆ ಹಲ್ಲೆ

ಮೈಸೂರು: ಮೈಸೂರು ಜಿಲ್ಲೆ ಕೆ.ಆರ್. ನಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಹೊಸಹಳ್ಳಿ ವೆಂಕಟೇಶ್ ರಾತ್ರಿ ಪ್ರಚಾರ ಮುಗಿಸಿ ತೆರಳುವ ಸಂದರ್ಭದಲ್ಲಿ 3 -4 ಮಂದಿ ಕಾರದಪುಡಿ ಎರಚಿ, ರಾಡ್ ನಿಂದ ಹಲ್ಲೆ ನಡೆಸಿದ್ದಾರೆ.

ಲಾಲನಹಳ್ಳಿ ಗೇಟ್ ಬಳಿ ಡ್ರಾಪ್ ಕೇಳುವ ನೆಪದಲ್ಲಿ ಕಾರು ನಿಲ್ಲಿಸಿದ ದುಷ್ಕರ್ಮಿಗಳು, ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿರುವ ವೆಂಕಟೇಶ್ ಹಾಗೂ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ಗಾಯಗೊಂಡಿರುವ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೆ.ಆರ್. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...